ಕೆಆರ್ ಪುರ: ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಶಾಸಕ ಬೈರತಿ ಬಸವರಾಜ ಅವರು ಹೇಳಿದರು

ಬಸವನಪುರ ಮುಖ್ಯರಸ್ತೆಯ ಸ್ತುತಿ ಕ್ಲಿನಿಕರ ಮತ್ತು ಫಿಸಿಯೋ ಕೇರ್ ನಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ರೋಗಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಬಸವನಪುರ ಸುತ್ತಮುತ್ತಲಿನ ಗ್ರಾಮದ ಜನರು ಈ ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು. ಆರೋಗ್ಯವಂತ ದೇಶ ನಿರ್ಮಾಣಕ್ಕೆ ಆರೋಗ್ಯವಂತ ಸಮಾಜ ಮುಖ್ಯ ಎಂದು ತಿಳಿಸಿದರು.

ಸ್ತುತಿ ಕ್ಲಿನಿಕ್ ನ ವೈದ್ಯರಾದ ಡಾ.ಅಕ್ಷಿತಾ ಮಾತನಾಡಿ, ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಈ ಶಿಬಿರ ನಡೆಯಲಿದ್ದು ಸುತ್ತಮುತ್ತಲಿನ ಬಡಾವಣೆಗಳ ಜನರು ಇದರ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಹೇಳಿದರು.
ಸಾಮಾನ್ಯ ರೋಗಗಳು, ಮಧುಮೇಹ, ಮೂಳೆ ಸಂಬಂಧಿತ, ಫಿಸಿಯೋ ತಪಾಸಣೆ, ಉಚಿತ ಸಮಗ್ರ ಆರೋಗ್ಯ ಸಲಹೆ, ಒಂದು ಉಚಿತ ಫಿಸಿಯೋಥೆರಪಿ ಚಿಕಿತ್ಸೆ ಒಳಗೊಂಡಿದೆ ಎಂದು ಹೇಳಿದರು.

ಲಯನ್ಸ್ ಕ್ಲಬ್ ಅನುಗ್ರಹ ಸಹಯೋಗದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದು ರಕ್ತದಾನ ಮಾಡಿ ಜೀವ ಉಳಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಲಿನಿಕ್ ನ ವೈದ್ಯರಾದ ಡಾ.ಅಕ್ಷಿತಾ, ಡಾ.ನಾಗೇಶ್, ಡಾ.ರಾಜೇಂದ್ರಕುಮಾರ್ , ಮಾರ್ಟಿನ್ ಬಾಬು, ಕ್ಷೇತ್ರ ಪ್ರ.ಕಾರ್ಯದರ್ಶಿ ಶ್ರೀರಾಮುಲು, ವಾರ್ಡ್ ಅಧ್ಯಕ್ಷರಾದ ಉದಯ್ ಕುಮಾರ್, ಡಿ.ಹೆಚ್.ರಮೇಶ್ , ಮುಖಂಡರಾದ ಖರೀಂಪಾಷ,ಬಸವನಪುರ ಗೋವಿಂದಸ್ವಾಮಿ, ಸಿಸಿ ಸುರೇಶ್, ಚಿಕ್ಕ ಮಾದಯ್ಯ ಮತ್ತಿತರರಿದ್ದರು.

Leave a Reply