Tag: Doddaballapura police

  • ದೊಡ್ಡಬಳ್ಳಾಪುರ ಲಾಡ್ಜ್ ನಲ್ಲಿ ವಿವಾಹಿತ ಮಹಿಳೆ ಶವಪತ್ತೆ

    ದೊಡ್ಡಬಳ್ಳಾಪುರ ಲಾಡ್ಜ್ ನಲ್ಲಿ ವಿವಾಹಿತ ಮಹಿಳೆ ಶವಪತ್ತೆ

    ದೊಡ್ಡಬಳ್ಳಾಪುರ : ನಗರದ ಲಾಡ್ಜ್ ನಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆಯಾಗಿದ್ದು ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮೃತ ಮಹಿಳೆಯನ್ನ ವಿದ್ಯಾ (21) ಎಂದು ಗುರುತಿಸಿಲಾಗಿದೆ, ಗೌರಿಬಿದನೂರು ತಾಲೂಕಿನ ಮುದಗೆರೆಯ ನಿವಾಸಿಯಾಗಿದ್ದ ಈಕೆ ಫಾಕ್ಸ್ ಕಾನ್ ಕಂಪನಿಯ ಉದ್ಯೋಗಿಯಾಗಿದ್ದಳು ಎಂದು ತಿಳಿದು ಬಂದಿದೆ. ಮುದಗೆರೆ ಗ್ರಾಮದ ಆನಂದ್ ಎಂಬುವರನ್ನು ಮದುವೆಯಾಗಿದ್ದು, ಇಬ್ಬರು ನಡುವೆ ಹೊಂದಾಣಿಕೆ ಇಲ್ಲದ ಕಾರಣದಿಂದ ಇಬ್ಬರು ಬೇರೆಯಾಗಿ ವಾಸವಾಗಿದ್ದರು.

    ನಿನ್ನೆ ಬೆಳಗ್ಗೆ 11:48 ರ ಸಮಯದಲ್ಲಿ ಗಂಡನ ಜೊತೆಯಲ್ಲಿ ಲಾಡ್ಜ್ ಒಳಗೆ ಹೋಗಿರುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಲಾಡ್ಜ್ ರೂಮ್ ನಲ್ಲಿ ಗಂಡ-ಹೆಂಡತಿ ನಡುವೆ ಜಗಳವಾಗಿರುವ ಸಾಧ್ಯತೆ ಇದ್ದು, ಗಂಡ ಆನಂದ್ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ, ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

  • ದೊಡ್ಡಬಳ್ಳಾಪುರ; ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ, ಪರಿಶೀಲನೆ.

    ದೊಡ್ಡಬಳ್ಳಾಪುರ; ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರ ದಾಳಿ, ಪರಿಶೀಲನೆ.

    ದೊಡ್ಡಬಳ್ಳಾಪುರ: ಡಿವೈಎಸ್‌ಪಿ ಉಪವಿಭಾಗ ವ್ಯಾಪ್ತಿಯಲ್ಲಿನ  45ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಮನೆಗಳ ಮೇಲೆ ಭಾನುವಾರ ಪೊಲೀಸರು ದಾಳಿ ನಡೆಸಿ ತಪಾಸಣೆ ನಡೆಸಿದರು.

    ಡಿವೈಎಸ್‌ಪಿ ಪಾಂಡುರಂಗ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ, ಹೊಸಹಳ್ಳಿ, ದೊಡ್ಡಬೆಳವಂಗಲ, ವಿಶ್ವನಾಥಪುರ, ಚೆನ್ನರಾಯಪಟ್ಟಣ ಹಾಗೂ ವಿಜಯಪುರ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

    ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಕ್ರಿಯ ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಆಯುಧಗಳು ಹಾಗೂ ಅಪರಾಧ ಚಟುವಟಿಕೆಗಳಿಗೆ ಬಳಸುವ ವಸ್ತುಗಳಿಗಾಗಿ ಶೋಧ ನಡೆಸಲಾಯಿತು.

    ತಪಾಸಣೆ ವೇಳೆ ಯಾವುದೇ ಮನೆಗಳಲ್ಲಿ ಆಯುಧಗಳು ಅಥವಾ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

  • ದೊಡ್ಡಬಳ್ಳಾಪುರ; ಗಾಂಜಾ ಮಾರಾಟಗಾರನ ಬಂಧನ, 6 ಕೆಜಿ 126 ಗ್ರಾಂ ಗಾಂಜಾ ವಶಕ್ಕೆ ಪಡೆದ ಪೊಲೀಸ್

    ದೊಡ್ಡಬಳ್ಳಾಪುರ; ಗಾಂಜಾ ಮಾರಾಟಗಾರನ ಬಂಧನ, 6 ಕೆಜಿ 126 ಗ್ರಾಂ ಗಾಂಜಾ ವಶಕ್ಕೆ ಪಡೆದ ಪೊಲೀಸ್

    ದೊಡ್ಡಬಳ್ಳಾಪುರ: 6 ಕೆಜಿ 126 ಗ್ರಾಂ ಒಣ ಗಾಂಜಾವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪದಡಿ ಯುವಕನೊಬ್ಬನನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಉತ್ತರಪ್ರದೇಶ ಮುರಾಬಾದ್ ಮೂಲದ 23 ವರ್ಷದ ಮುಷರಫ್ ಅಲಿ ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ನಗರದ ಅರ್ಕಾವತಿ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು ಎನ್ನಲಾಗಿದೆ.

    ಆರೋಪಿಯು ನಗರದಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಉತ್ತರ ಪ್ರದೇಶದಿಂದ ದೊಡ್ಡಬಳ್ಳಾಪುರಕ್ಕೆ ಒಣ ಗಾಂಜಾವನ್ನು ತಂದು ತನ್ನ ಮನೆಯಲ್ಲಿ ಶೇಖರಿಸಿಟ್ಟಿದ್ದ, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 6 ಕೆಜಿ 126 ಗ್ರಾಂ ಅಕ್ರಮ ಒಣ ಗಾಂಜಾ ಜೊತೆಗೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  • ದೊಡ್ಡಬಳ್ಳಾಪುರ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ, ವ್ಯಕ್ತಿ ಸ್ಥಳದಲ್ಲೆ ಸಾವು

    ದೊಡ್ಡಬಳ್ಳಾಪುರ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ, ವ್ಯಕ್ತಿ ಸ್ಥಳದಲ್ಲೆ ಸಾವು

    ದೊಡ್ಡಬಳ್ಳಾಪುರ: ತಾಲ್ಲೂಕಿನ ಪಾಲನಜೋಗಿಹಳ್ಳಿ ಬಳಿ ಕೆಎಸ್ಆರ್ ಟಿಸಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

    ಮೃತನು ಪಾಲನಜೋಗಿಹಳ್ಳಿ ನಿವಾಸಿ 29 ವರ್ಷದ  ಪುರುಷೋತ್ತಮ ಎಂದು ತಿಳಿದುಬಂದಿದೆ. ಅಪಘಾತದಿಂದ ತೀವ್ರ ರಕ್ತಸ್ರಾವಗೊಂಡ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯ ಮೂಲಗಳು ಮಾಹಿತಿ ನೀಡಿದೆ.

    ಹಿಂದೂಪುರದಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ KA-40, F-1407 ನಂಬರ್ ಪ್ಲೇಟುಳ್ಳ ಬಸನ್ನು ಓವರ್ ಟೇಕ್ ಮಾಡಲು ಮುಂದಾದ ಬೈಕ್ ಸವಾರ ಬಸ್ ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕೆ ಅಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

  • ದೊಡ್ಡಬಳ್ಳಾಪುರ: ಮಹಿಳೆಗೆ ಕೋಳಿ ಸಾಗಿಸುವ ವಾಹನ ಡಿಕ್ಕಿ, ಮಹಿಳೆ ಸಾವು, ಡ್ರೈವರ್ ಪೊಲೀಸರಿಗೆ ಶರಣು

    ದೊಡ್ಡಬಳ್ಳಾಪುರ: ಮಹಿಳೆಗೆ ಕೋಳಿ ಸಾಗಿಸುವ ವಾಹನ ಡಿಕ್ಕಿ, ಮಹಿಳೆ ಸಾವು, ಡ್ರೈವರ್ ಪೊಲೀಸರಿಗೆ ಶರಣು

    ದೊಡ್ಡಬಳ್ಳಾಪುರ: ಕೋಳಿ ಸಾಗಿಸುವ ವಾಹನವೊಂದು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೂ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹಮಾಮ್ ಗೇಟ್ ಬಳಿ ಮಾ.26ರ ಗುರುವಾರ ರಾತ್ರಿ 9.ಗಂಟೆ ಸುಮಾರಿಗೆ ನಡೆದಿದೆ.

    ಮೃತರನ್ನು ಲಕ್ಷ್ಮೀದೇವಮ್ಮ (60)ವರ್ಷ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯು ಕೋಲಾರ ಮೂಲದವರಾಗಿದ್ದು ದೊಡ್ಡಬಳ್ಳಾಪುರದಲ್ಲಿ ನೆಲೆಸಿದ್ದರು ಎಂದು ತಿಳಿದುಬಂದಿದೆ.

    ಅಪಘಾತವೆಸಗಿದ ಡ್ರೈವರ್ ಭಯಭೀತನಾಗಿ ನೇರವಾಗಿ  ನಗರ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

  • ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಕೊಲೆಗೆ ಯತ್ನ ಪ್ರಕರಣ; ರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

    ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಕೊಲೆಗೆ ಯತ್ನ ಪ್ರಕರಣ; ರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

    ದೊಡ್ಡಬಳ್ಳಾಪುರ; (ಪ್ರಭಾ, ಮಾ.24 ); ದಸ್ತಗಿರಿಗೆ ಮುಂದಾದ ಪೊಲೀಸರ ಮೇಲೆ ಚಾಕುವಿನಿಂದ ಚುಚ್ಚಿ, ಹಲ್ಲೆಮಾಡಿ ಕೊಲೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳಿಗೆ ದೊಡ್ಡಬಳ್ಳಾಪುರದ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದೆ.

    ಕೊಲೆಗೆ ಯತ್ನಿಸಿದ ಆರೋಪಿಗಳು ಹೇಮಂತ್, ಸೋನು ಎಂದು ತಿಳಿದುಬಂದಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ದ ಡಕಾಯಿತಿ ಮತ್ತು ಕೊಲೆ ಆರೋಪದಡಿ ಪ್ರಕರಣ ದಾಖಲಾಗಿತ್ತು, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರ ತಂಡ ರಚನೆ ಮಾಡಲಾಗಿತ್ತು. ಅದರಂತೆ  ದಿನಾಂಕ: 10.09.2020 ರಂದು ಸಂಜೆ 5.55 ಗಂಟೆಯಲ್ಲಿ ಆರೋಪಿಗಳಾದ ಹೇಮಂತ್ ಕುಮಾರ್ ಹಾಗೂ ಸೋನು ರವರುಗಳು ಕೆಎ-03-ಎಂಸಿ-6915 ಚವರ್ಲೆಟ್ ಕಾರಿನಲ್ಲಿ ದೊಡ್ಡಬಳ್ಳಾಪುರ – ಡಾಬಸ್ ಪೇಟೆ ಮೂಲಕ ತುಮಕೂರು ಕಡೆಗೆ ಹೋಗುತ್ತಿರುತ್ತಾರೆಂದು ಈ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸರ್ಕಾರಿ ವಾಹನಗಳಲ್ಲಿ ಕೊಡಿಗೇಹಳ್ಳಿ ಕಡೆಯಿಂದ ಆರೋಪಿಗಳನ್ನು ಹಿಂಬಾಲಿಸಿಕೊಂಡು ಬಂದು ಕೆಸ್ತೂರು ಗ್ರಾಮದ ಬಳಿ ಬಂಡಿಜಾಡು ರಸ್ತೆಯಲ್ಲಿ ಆರೋಪಿಗಳ ಕಾರನ್ನು ಅಡ್ಡ ಹಾಕಿ ದಸ್ತಗಿರಿ ಮಾಡಲು ಹೋದಾಗ ಇಬ್ಬರೂ ಆರೋಪಿಗಳು ಕೈಗಳಲ್ಲಿ ಚಾಕುಗಳನ್ನು ಹಿಡಿದುಕೊಂಡು ಬಂದು ಹತ್ತಿರ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಿಡಿದುಕೊಳ್ಳಲು ಹೋದ ಪೊಲೀಸರಿಗೆ ಚಾಕುವಿನಿಂದ ಚುಚ್ಚಿ ಹಲ್ಲೆಮಾಡಿ ರಕ್ತಗಾಯಗೊಳಿಸಿ ಕೊಲೆ ಮಾಡಲು ಪ್ರಯತ್ನಿಸಿದ್ದದ್ದರು. ಈ ಸಂಬಂಧ ಆರೋಪಿಗಳ ವಿರುದ್ಧ ಅಂದಿನ ತನಿಖಾಧಿಕಾರಿಗಳಾಗಿದ್ದ ಪೊಲೀಸ್ ಇನ್ಸೆಕ್ಟರ್ ಕುಮಾರ್ ಎ.ವಿ ರವರು ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

    ಈ ಪ್ರಕರಣವು ನಗರದ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠವು  ಎಸ್.ಸಿ.ನಂ:10003/2021 ರಂತೆ ವಿಚಾರಣೆ ನಡೆಸಿತ್ತು, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀ. ಟಿ.ಎನ್ ನಟರಾಜ ರವರು ವಾದ ಮಂಡಿಸಿದ್ದರು. ಪ್ರಕರಣದಲ್ಲಿ ಆರೋಪಿತರು ಅಪರಾಧ ಎಸಗಿರುವುದು ಸಾಭೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಶ್ರೀಮತಿ. ನಿರ್ಮಲ. ಕೆ ರವರು ಮಾರ್ಚ್ 23 ರಂದು ರಂದು ಪ್ರಕರಣದ ಇಬ್ಬರೂ ಆರೋಪಿತರಿಗೆ ಐ.ಪಿ.ಸಿ ಕಲಂ;307 ರ ಅಪರಾಧಕ್ಕಾಗಿ 10 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ತಲಾ 10,000/- ರೂ ದಂಡ, ಐ.ಪಿ.ಸಿ ಕಲಂ;332 ರ ಅಪರಾಧಕ್ಕಾಗಿ 3 ವರ್ಷ ಕಠಿಣ ಕಾರಾಗೃಹ ವಾಸ ಹಾಗೂ ತಲಾ 5,000/- ರೂ ದಂಡ ಮತ್ತು ಐ.ಪಿ.ಸಿ ಕಲಂ; 353 ಅಪರಾಧಕ್ಕಾಗಿ 2 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.