Tag: doddaballapura rural police

  • ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ ನೆಲೆಸಿದ್ದ ಮೂವರು ನೈಜೀರಿಯನ್ ಪ್ರಜೆಗಳ ವಶಕ್ಕೆ

    ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ ನೆಲೆಸಿದ್ದ ಮೂವರು ನೈಜೀರಿಯನ್ ಪ್ರಜೆಗಳ ವಶಕ್ಕೆ

    ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ವಾಸವಾಗಿದ್ದ ನೈಜೀರಿಯನ್ ದೇಶದ ಮೂವರು ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ.

    ಬಂದಿತರನ್ನು ಮ್ಯಾಕ್ಸ್ವೆಲ್, ವ್ಯಾಕೋಬ್, ಅದ್ಭುತ ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ,  ಖಚಿತ ಮಾಹಿತಿಯ ಮೇರೆಗೆ ಮೂವರು ನೈಜೀರಿಯನ್ ಪ್ರಜೆಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು.

    ವಿಚಾರಣೆ ಹಾಗೂ ಪರಿಶೀಲನೆ ವೇಳೆ ವಿದೇಶಿ ಪ್ರಜೆಗಳು ಪಾಸ್‌ಪೋರ್ಟ್ ಹಾಗೂ ವೀಸಾ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಕಂಡುಬಂದಿದೆ.

    ಈ ಸಂಬಂಧ ಮೂವರು ನೈಜೀರಿಯನ್ ಪ್ರಜೆಗಳನ್ನು FRRO (ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ) ಮುಂದೆ ಹಾಜರುಪಡಿಸಿ, ಅವರ ವಲಸೆ/ವೀಸಾ ಸ್ಥಿತಿಗೆ ಅನುಗುಣವಾಗಿ ಕಾನೂನುಬದ್ಧವಾಗಿ ಅವರ ಸ್ವದೇಶಕ್ಕೆ ಕಳುಹಿಸುವ (ಗಡೀಪಾರು/ತೆಗೆಯುವಿಕೆ)ಕ್ರಮ ಕೈಗೊಳ್ಳಲಾಗಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.

  • ಬೆಳ್ಳಂಬೆಳಗ್ಗೆ ಅಪಘಾತ, ಓರ್ವ ಸಾವು

    ಬೆಳ್ಳಂಬೆಳಗ್ಗೆ ಅಪಘಾತ, ಓರ್ವ ಸಾವು

    ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ-ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

    ಮೃತರನ್ನು ಮಾಕಳಿ ಗ್ರಾಮದ ಗಂಗರಾಜು (34) ಎಂದು ಗುರುತಿಸಲಾಗಿದೆ. ಅವರು ಮಾಕಳಿ ಬೆಟ್ಟದಲ್ಲಿ ಟ್ರಕ್ಕಿಂಗ್ ಗೈಡ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೆಲಸದ ನಿಮಿತ್ತ ಬೆಳಗ್ಗೆ ಮನೆಯಿಂದ ಬರುವ ವೇಳೆ, ಗೌರಿಬಿದನೂರು ಕಡೆಯಿಂದ ಬರುತ್ತಿದ್ದ ಮತ್ತೊಂದು ಬೈಕ್ ಇವರ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಡಿಕ್ಕಿಯ ರಭಸಕ್ಕೆ ಎರಡೂ ಬೈಕ್‌ಗಳು ಜಖಂಗೊಂಡಿದ್ದು, ಗಂಗರಾಜು ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನ ಸವಾರನ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ದೊಡ್ಡಬಳ್ಳಾಪುರ; ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವು, ಜಮೀನು ಮಾಲೀಕನ ವಿರುದ್ದ ಎಫ್ ಐಆರ್ ದಾಖಲು

    ದೊಡ್ಡಬಳ್ಳಾಪುರ; ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವು, ಜಮೀನು ಮಾಲೀಕನ ವಿರುದ್ದ ಎಫ್ ಐಆರ್ ದಾಖಲು

    ದೊಡ್ಡಬಳ್ಳಾಪುರ; ತಾಲ್ಲೂಕು ತೊಗರೀಘಟ್ಟ ಗ್ರಾಮದಲ್ಲಿನ ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಧಾರುಣ ಘಟನೆ ಇಂದು ನಡೆದಿದೆ.

    ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತರನ್ನು ಸವಿತಾ ಮತ್ತು ಮುನಿರಾಜು ದಂಪತಿಯ ಮಗಳು 11ವರ್ಷದ ದಕ್ಷ, ಹಾಗೂ ಆಶಾ ಮತ್ತು ಪ್ರದೀಪ್ ದಂಪತಿಯ ಮಗ 4 ವರ್ಷದ ಧನುಷ್ ಎಂದು ಗುರುತಿಸಲಾಗಿದೆ. ಗುರುಮೂರ್ತಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ನಿರ್ಮಿಸಿದ ಕೃಷಿ ಹೋಂಡದಲ್ಲಿ ಈ ಘಟನೆ ನಡೆದಿದೆ.

    ಕೃಷಿ ಹೊಂಡಕ್ಕೆ ಸರಿಯಾಗಿ ಭದ್ರತೆ ಮಾಡದೆ ಇಬ್ಬರು ಮಕ್ಕಳ ಸಾವಿಗೆ ಕಾರಣರಾದ ಗುರುಮೂರ್ತಿ ವಿರುದ್ಧ 106 BNS ರೀತಿಯ ಪ್ರಕರಣ ದಾಖಲಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಡಾ.ಎಂ.ಬಿ ನವೀನ್ ಕುಮಾರ್ ರವರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

  • ದೊಡ್ಡಬಳ್ಳಾಪುರ; ಮನೆಗೆ ನುಗ್ಗಿದ ಕಳ್ಳರು, ಚಿನ್ನಾಭರಣ ದೋಚಿ ಪರಾರಿ

    ದೊಡ್ಡಬಳ್ಳಾಪುರ; ಮನೆಗೆ ನುಗ್ಗಿದ ಕಳ್ಳರು, ಚಿನ್ನಾಭರಣ ದೋಚಿ ಪರಾರಿ

    ದೊಡ್ಡಬಳ್ಳಾಪುರ:  ಮನೆ ಬೀಗ ಒಡೆದ ಕಳ್ಳರು  ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಎಸ್ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿ ಪರಾರಿಯಾಗಿದ್ದಾರೆ.

     ಕಳ್ಳರು ಮನೆಯಲ್ಲಿದ್ದ 10 ಗ್ರಾಂ ಚಿನ್ನದ ಚೈನ್, ತಲಾ 15 ಗ್ರಾಂ ತೂಕದ ಬ್ರೇಸ್ಲೆಟ್ ಮತ್ತು ನೆಕ್ಲೇಸ್, 8 ಗ್ರಾಂ ಉಂಗುರ, ಮೂರು ಜೋಡಿ ಕಾಲುಗೆಜ್ಜೆ ಹಾಗೂ 1 ಲಕ್ಷ 30 ಸಾವಿರ ನಗದು ನಗದು ದೋಚಿ ಎಸ್ಕೇಪ್ ಆಗಿದ್ದಾರೆ.

    ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.